ಉದ್ಯಾವರ: ಆಶ್ರಯ ರಹಿತರಿಗೆ, ಕೂಲಿ ಕಾರ್ಮಿಕರಿಗೆ ಊಟ ವಿತರಣೆ

ಉಡುಪಿ: ದೇಶ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀ ದಿನಕರ ಬಾಬು ಇವರ ನೇತೃತ್ವದಲ್ಲಿ ಉದ್ಯಾವರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಆಶ್ರಯ ರಹಿತರಿಗೆ, ಕೂಲಿ ಕಾರ್ಮಿಕರಿಗೆ ಊಟವನ್ನು ವಿತರಿಸಲಾಗುತ್ತಿದ್ದು, ಊಟಕ್ಕೆ ಹಲವಾರು ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಇವರು ಕೂಡಾ ಊಟ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾಸ್ಕ್ ಹಾಗೂ ಊಟ ವಿತರಿಸಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ […]