ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರಿಗಿದೆ: ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾನಸಿಕ ಬೆಳವಣಿಗೆ ಪೂರಕವಾದ ಶಿಕ್ಷಣ ನೀಡುವ ಜತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಬುಧವಾರ ಉದ್ಯಾವರ ಸೈಂಟ್ ಫ್ರಾನ್ಸಿಸ್ ಝೇವಿಯರ್ ಆಂಗ್ಲ ಮಾಧ್ಯಮ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಶಿಕ್ಷಣ ಸೊಸೈಟಿ ವತಿಯಿಂದ ಆಯೋಜಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ನೀಡುವ ಶಿಕ್ಷಣ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಒಂದು […]