ಉಡುಪಿ ಜಿಲ್ಲೆಯಲ್ಲಿ ಯುವಜನತೆ ಉದ್ಯೋಗ ಪಡೆಯಲು ಪೂರಕ ವಾತಾವರಣವಿದೆ :ಸಂಸದೆ ಶೋಭಾ
ಕುಂದಾಪುರ: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದಿಂದ ದೊರೆಯಬಹುದಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಉಡುಪಿ ಜಿಲ್ಲೆಗೆ ಒದಗಿಸಿದ್ದು, ಯುವಜನತೆ ಉದ್ಯೋಗ ಪಡೆಯಲು ಎಲ್ಲಾ ರೀತಿಯ ಪೂರಕ ವಾತಾವರಣ ಜಿಲ್ಲೆಯಲ್ಲಿದ್ದು, ಯುವ ಜನತೆ ಇದರ ಸದುಪಯೋಗ ಪಡೆಯುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಅವರು ಭಾನುವಾರ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ […]