ಫೆಬ್ರವರಿ 21 ರಿಂದ ಮಾರ್ಚ್ 10 ರವರೆಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಯುಜಿಸಿ-ನೆಟ್ 2023 ರ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್.ಟಿ.ಎ) ಪ್ರಕಾರ,ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆಯು ಫೆಬ್ರವರಿ 21 ರಿಂದ ಮಾರ್ಚ್ 10, 2023 ರವರೆಗೆ ನಡೆಯಲಿದೆ. ಯುಜಿಸಿ-ನೆಟ್ 2023 ಪರೀಕ್ಷೆಯ ನೋಂದಣಿ ಪ್ರಕ್ರಿಯೆಯು ಇಂದು ಪ್ರಾರಂಭವಾಗಿದೆ. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು 17 ಜನವರಿ 2023 ರ ಸಂಜೆ 5 ಗಂಟೆ ಮೊದಲು ಸಲ್ಲಿಸಬೇಕು. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ವಿದ್ಯಾರ್ಥಿಗಳ ಸೂಕ್ತತೆಯನ್ನು ನಿರ್ಧರಿಸಲು, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಫೆಬ್ರವರಿ 2023 […]
ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯು.ಜಿ.ಸಿ 12ಬಿ ಮಾನ್ಯತೆ

ಉಡುಪಿ, ಜುಲೈ 1: ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜು ಜೂನ್ 25 ರಂದು ಯು.ಜಿ.ಸಿ. ಕಾಯ್ದೆ 1956ರ 12 ಬಿ ಕಲಂ ಅಡಿಯಲ್ಲಿ ಮಾನ್ಯತೆ ಪಡೆದಿದೆ. ಕಾಲೇಜು ಈಗ ಕೇಂದ್ರ ಸರ್ಕಾರದಿಂದ ಬರುವ ಹಣಕಾಸಿನ ನೆರವು ಪಡೆಯಲು ಅರ್ಹವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.