ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾ‌ನ

ಉಡುಪಿ: ಕಠಿಣ ಪರಿಶ್ರಮ, ಧೈರ್ಯ, ಕಾಳಜಿ ಮತ್ತು ಸಮರ್ಪಣಾ ಭಾವದಿಂದ ಜೀವನದಲ್ಲಿ ಎಲ್ಲವನ್ನೂ ಸಾಧಿಸಬಹುದು. ಪ್ರೀತಿ ಮತ್ತು ಪ್ರಯತ್ನವು ಶ್ರೇಷ್ಠತೆಗೆ ಕಾರಣವಾಗುತ್ತದೆ ಎಂದು ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಹೇಳಿದರು. ಉಡುಪಿ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಭಾವಪ್ರಕಾಶ ಸಭಾಂಗಣದಲ್ಲಿ ನಡೆದ ‘ವಿಶಿಖಾನುಪ್ರವೇಶ’ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ […]