ಉಕ್ರೇನ್ ರಾಜಧಾನಿಯಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು !

ರಷ್ಯಾ ಮತ್ತು ಉಕ್ರೇನ್ ನಡುವಿನ ಕದನದ ಭಾರತೀಯ ವಿದ್ಯಾರ್ಥಿ ನವೀನ್ ಸಾವಿನ ಪ್ರಕರಣ ಇನ್ನೂ ಮಾಸಿಲ್ಲ. ಅಷ್ಟರಲ್ಲಿ ಉಕ್ರೇನ್ ರಾಜಧಾನಿ ಕೀವ್ದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು ಬಿದ್ದಿದ್ದು, ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದ್ದು, ಆತ ಮಾರ್ಗ ಮಧ್ಯದಲ್ಲಿ ವಾಪಸ್ಸಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯುದ್ಧ ಪೀಡಿತ ದೇಶ ಉಕ್ರೇನ್‌ನಿಂದ ವಿದ್ಯಾರ್ಥಿಗಳು ಪಲಾಯನ ಮಾಡುತ್ತಿದ್ದು, ಭಾರತಕ್ಕೆ ಸುರಕ್ಷಿತವಾಗಿ ಮರಳಲು ಪೋಲೆಂಡ್‌ನ ಗಡಿಯನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ.