ದೇಶದಲ್ಲಿ ಏರುತ್ತಿರುವ ಗೋಧಿ ಬೆಲೆ ತಗ್ಗಿಸಲು ರಫ್ತಿಗೆ ನಿಷೇಧ ಹೇರಿದ ಭಾರತ: ನಿರ್ಧಾರದಿಂದ ಯೂರೋಪಿನಲ್ಲಿ ತಳಮಳ!

ದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಗೋಧಿ ಮತ್ತು ಅದರ ಉತ್ಪನ್ನಗಳ ಬೆಲೆಗಳನ್ನು ತಗ್ಗಿಸುವ ನಿಟ್ಟಿನಲ್ಲಿ ತತ್ಕಾಲದಿಂದಲೇ ಜಾರಿಗೆ ಬರುವಂತೆ ಗೋದಿಯ ರಫ್ತನ್ನು ನಿಷೇಧಿಸಿ ಭಾರತ ಸರಕಾರದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಆದೇಶ ಹೊರಡಿಸಿದ್ದಾರೆ. ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ದ, ಹಾಗೂ ಏರುತ್ತಿರುವ ತಾಪಮಾನದಿಂದಾಗಿ ವಿದೇಶೀ ಮಾರುಕಟ್ಟೆಗಳಲ್ಲಿ ಗೋಧಿಯ ಆವಕ ಕಡಿಮೆಯಾಗುತ್ತಿದ್ದು, ಯೂರೋಪ್, ಅಮೇರಿಕಾ ಮತ್ತಿತರ ದೇಶಗಳಿಗೆ ಗೋಧಿಯನ್ನು ರಫ್ತು ಮಾಡುವ ಉದ್ದೇಶದಲ್ಲಿದ್ದ ಭಾರತವು ಇದೀಗ ರಫ್ತಿನ ಮೇಲೆ ನಿಷೇಧ ಹೇರಿರುವುದು ಯೂರೋಪ್ ಮುಂತಾದ ದೇಶಗಳಲ್ಲಿ ತಳಮಳವನ್ನು […]
ಉಕ್ರೇನ್‌ನಲ್ಲಿ ತಕ್ಷಣದ ಕದನ ವಿರಾಮಕ್ಕೆ ಮನವಿ ಮಾಡಿದ್ದೇವೆ: ಪ್ರಧಾನಿ ಮೋದಿ

“ಉಕ್ರೇನ್‌ನಲ್ಲಿ ತಕ್ಷಣದ ಕದನ ವಿರಾಮ ಮತ್ತು ಸಮಸ್ಯೆಗೆ ಪರಿಹಾರಕ್ಕಾಗಿ ಸಂವಾದ ಮತ್ತು ಕಾರ್ಯತಂತ್ರದ ಹಾದಿಯನ್ನು ಹಿಡಿಯಲು ನಾವು ಮನವಿ ಮಾಡಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರನ್ನು ಭೇಟಿಯಾದರು. ಕೋಪನ್ ಹ್ಯಾಗನ್ ನಲ್ಲಿ ಉಭಯ ಸರ್ಕಾರಗಳು ಉದ್ದೇಶ ಪತ್ರಗಳು ಮತ್ತು ತಿಳುವಳಿಕೆ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡವು. ಈ ಸಭೆಯಲ್ಲಿ, ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಡೆನ್ಮಾರ್ಕ್ ಮತ್ತು ಇಡೀ ಯೂರೋಪಿಯನ್ ಒಕ್ಕೂಟವು ಉಕ್ರೇನ್ ಮೇಲೆ […]
ಯುದ್ಧ ಪೀಡಿತ ಉಕ್ರೇನ್‌ನಿಂದ ತನ್ನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ನೋಡಲ್ ಅಧಿಕಾರಿಯನ್ನು ನೇಮಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ನಡುವೆ ಕರ್ನಾಟಕ ಸರ್ಕಾರವು ಯುದ್ಧ ಪೀಡಿತ ಪೂರ್ವ ಯುರೋಪಿಯನ್ ರಾಷ್ಟ್ರದಿಂದ ತನ್ನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅನುಕೂಲವಾಗುವಂತೆ ನೋಡಲ್ ಅಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ನಾಗರಿಕರನ್ನು ಆಯಾಯ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಿಸಲು ಅನುಕೂಲವಾಗುವಂತೆ ಕರ್ನಾಟಕ ಸರ್ಕಾರವು ನೋಡಲ್ ಅಧಿಕಾರಿಯನ್ನು ನೇಮಿಸಿದೆ. ನೋಡಲ್ ಕಚೇರಿಯು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಕೀವ್ ನಲ್ಲಿ ಭಾರತದ ರಾಯಭಾರಿ ಕಚೇರಿಯೊಂದಿಗೆ ಸಮನ್ವಯ ಸಾಧಿಸುತ್ತದೆ ಮತ್ತು ಉಕ್ರೇನ್ ನಲ್ಲಿ ಸಿಕ್ಕಿಬಿದ್ದಿರುವ ಜನರನ್ನು ಸ್ಥಳಾಂತರಿಸಲು […]
ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ರಷಿಯಾ: ದೇಶದ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವವರಿಗೆ ಖಡಕ್ ಎಚ್ಚರಿಕೆ ನೀಡಿದ ಪುತಿನ್

ದೆಹಲಿ: ರಷಿಯಾದ ಸುರಕ್ಷತೆಗಾಗಿ ತೆಗೆದುಕೊಳ್ಳುತ್ತಿರುವ ಕ್ರಮಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನ ಮಾಡಿದಲ್ಲಿ ‘ಅವರು ಹಿಂದೆಂದೂ ನೋಡಿರದ ಪರಿಣಾಮಗಳನ್ನು’ ಎದುರಿಸಬೇಕಾಗುತ್ತದೆ ಎಂದು ಇತರ ದೇಶಗಳಿಗೆ ರಷಿಯಾ ಅಧ್ಯಕ್ಷ ವ್ಲಾದಿಮೀರ್ ಪುತಿನ್ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ಯನ್ನು ಅನುಮೋದಿಸುವ ಮೂಲಕ ಯುದ್ಧವನ್ನು ಘೋಷಿಸಿದ ಪುತಿನ್, ಇದು ನಾಗರಿಕರನ್ನು ರಕ್ಷಿಸುವ ಉದ್ದೇಶವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಪುತಿನ್, ಉಕ್ರೇನ್‌ನಿಂದ ಬರುತ್ತಿರುವ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿಯನ್ನು […]