ಉಳ್ಳಾಲ ಮಂಜನಾಡಿಯಲ್ಲಿ ಯಕ್ಷಗಾನ ಕಾರ್ಯಾಗಾರ ಯಕ್ಷ ಸೌರಭ

ಉಡುಪಿ: ಯಕ್ಷಗಾನ ಕಲೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಈ ಕಲೆಯ ಆಳ, ವಿಸ್ತಾರ, ಸೊಬಗನ್ನು ಯಕ್ಷಾಸಕ್ತರಿಗೆ ಮುಟ್ಟಿಸಲು ವಿವಿಧ ಕಡೆಗಳಲ್ಲಿ ಯಕ್ಷಗಾನ ಕಾರ್ಯಾಗಾರಗಳನ್ನು ಅಕಾಡೆಮಿ ಹಮ್ಮಿಕೊಳ್ಳುವುದರ ಮೂಲಕ ಕಲೆಯ ಬೆಳೆವಣಿಗೆಗೆ ಪ್ರೋತ್ಸಾಹಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಮಂಗಳೂರು ಉಲ್ಲಾಳದ ಮಂಜನಾಡಿ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಹಮ್ಮಿಕೊಂಡ ‘ತೆಂಕುತಿಟ್ಟು ಯಕ್ಷಗಾನ ಮುಖವರ್ಣಿಕೆ ಮತ್ತು ವೇಷಭೂಷಣ ಕಟ್ಟುವ ಬಗ್ಗೆ ಕಾರ್ಯಾಗಾರ, […]