ಮೂಡಬಿದಿರೆ: ಜನರ ಸಮಸ್ಯೆಗೆ ಸ್ಪಂಧಿಸದ ಅಧಿಕಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ತರಾಟೆ

ಮೂಡಬಿದಿರೆ: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ.  ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕರು ಏಕಾಏಕಿ ಮೂಡಾ ಕಚೇರಿಗೆ ತೆರಳಿದ್ದಾರೆ.  ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಂತದ್ದನ್ನು ಕಂಡ ಶಾಸಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತನ್ನ ರೌದ್ರಾವತಾರ ತೋರಿದ್ದಾರೆ. ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ. ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತರೂ ಅವರ ಸಮಸ್ಯೆ ಕೇಳುವವರಿಲ್ಲ. […]