ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನಿಯಮವೇ ಅಂತಿಮ: ಸಚಿವ ಕೋಟ ಹೇಳಿಕೆ

ಉಡುಪಿ: ರಾಜ್ಯ ಸರ್ಕಾರವು ಶಾಲಾ ಕಾಲೇಜಿನ ವಸ್ತ್ರಸಂಹಿತೆ ಕುರಿತಂತೆ ಈಗಾಗಲೇ ಆದೇಶ ಹೊರಡಿಸಿದೆ. ಅದರಂತೆ ಶಾಲಾ ಸಮವಸ್ತ್ರವೇ ಅಂತಿಮ. ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶವನ್ನು ಅನುಷ್ಟಾನಗೊಳಿಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ. ಅದನ್ನು ಮಾಡಿಸುತ್ತೇವೆ ಎಂದರು..