ನಾಳೆ (ಫೆ.1) ಕೇಂದ್ರ ಬಜೆಟ್ ಮಂಡನೆ: ಕರಾವಳಿ ಜನರಿಂದ ಭಾರೀ ನಿರೀಕ್ಷೆ!

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ (ಭಾನುವಾರ) ಒಂಭತ್ತನೆಯ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕರಾವಳಿ ಜನರಿಂದ ಬಹಳಷ್ಟು ನಿರೀಕ್ಷೆಗಳಿವೆ. ಹೆಜಮಾಡಿ ಬಂದರು ಅಭಿವೃದ್ಧಿ, ಮಲ್ಪೆ ಬಂದರು ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ಫ್ಲೈ ಓವರ್ ಕಾಮಗಾರಿ ಮತ್ತು ಕಟಪಾಡಿ ಜಂಕ್ಷನ್ ಅಂಡರ್ ಪಾಸ್ ಕಾಮಗಾರಿಗೆ ಹೆಚ್ಚಿನ ಅನುದಾನ ಒದಗಿಸಬೇಕೆಂಬುವುದು ಕರಾವಳಿಗರ ಪ್ರಮುಖ ಬೇಡಿಕೆಯಾಗಿದೆ. ನಾಳೆ ಮಂಡನೆಯಾಗುವ ಕೇಂದ್ರ ಬಜೆಟ್ ನಲ್ಲಿ ಹೆಜಮಾಡಿ ಬಂದರಿಗೆ ಇನ್ನಷ್ಟು ಅನುದಾನ ಒದಗಿಸಿ […]