ಕೇಂದ್ರ ಬಜೆಟ್ ನಲ್ಲಿ ಪರಿಸರ ಅರ್ಥಶಾಸ್ತ್ರಕ್ಕೆ ನಿರೀಕ್ಷಿತ ಪ್ರಮಾಣದ ಬೆಂಬಲವಿಲ್ಲ: ಡಾ.ರೆಸ್ಮಿ ಭಾಸ್ಕರನ್

ಮಣಿಪಾಲ: ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ “ಯೂನಿಯನ್ ಬಜೆಟ್ -2023” ಅನ್ನು ಪರಿಸರ ಅರ್ಥಶಾಸ್ತ್ರದ ದೃಷ್ಟಿಕೋನದಿಂದ ವಿಶ್ಲೇಷಿಸಿದಾಗ ಅದು ನಿರೀಕ್ಷೆಗಳಿಗಿಂತ ಕಡಿಮೆಯಾಗಿದೆ. ಬಜೆಟ್‌ನಲ್ಲಿ ಭರವಸೆ ನೀಡಿರುವ ಹಸಿರು ಬೆಳವಣಿಗೆಯು ಸದ್ಯದ ಪರಿಸರಕ್ಕೆ ಒದಗಿರುವ ಸವಾಲುಗಳನ್ನು ಎದುರಿಸಲು ಸಾಕಾಗುವುದಿಲ್ಲ ಎಂದು ಅರ್ಥಶಾಸ್ತ್ರಜ್ಞೆ ಮತ್ತು ಲೇಖಕಿ ಡಾ.ರೆಸ್ಮಿ ಭಾಸ್ಕರನ್ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (GCPAS) ಆಶ್ರಯದಲ್ಲಿ ‘ಕೇಂದ್ರ ಬಜೆಟ್ ಮತ್ತು ಪರಿಸರ ಅರ್ಥಶಾಸ್ತ್ರ’ದ ಕುರಿತು ಎರಡು ಉಪನ್ಯಾಸಗಳನ್ನು ನೀಡಿ ಮಾತನಾಡಿದ ಡಾ.ರೆಸ್ಮಿ ಭಾಸ್ಕರನ್, […]

ಕೇಂದ್ರ ಬಜೆಟ್- ಆತ್ಮ ನಿರ್ಭರದಿಂದ ಅಮೃತ ಕಾಲದತ್ತ ಭಾರತ: ಉಡುಪಿ ಜಿಲ್ಲಾ ಬಿಜೆಪಿ

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರವರು ಮಂಡಿಸಿರುವ ಕೇಂದ್ರ ಬಜೆಟ್-2023 ಒಂದು ಅತ್ಯುತ್ತಮ ಬಜೆಟ್. ‘ನೀರಸ ಜಗತ್ತಿಗೆ ಭಾರತ ಒಂದೇ ಭರವಸೆ’ ಎಂಬ ಮಾತಿನಂತೆ ಈ ಬಜೆಟ್ ಉತ್ತರದಾಯಿಯಾಗಿ ಮೂಡಿ ಬಂದಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರ್ಥಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ದಿವಾಕರ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 2023ಬೇ ಸಾಲಿನ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಫೆಡರಲ್ ಸಿಸ್ಟಮ್‌ನಲ್ಲಿರುವ ಭಾರತದಂತಹ ದೇಶದಲ್ಲಿ ಇಂತಹ […]

ಕೇಂದ್ರ ಬಜೆಟ್ 2023: ಭದ್ರಾ ಮೇಲ್ದಂಡೆಗೆ 5300 ಕೋಟಿ; ಮತ್ಸ್ಯ ಸಂಪದ ಯೋಜನೆಗೆ 6,000 ಕೋಟಿ ರೂ. ಅನುದಾನ

ನವದೆಹಲಿ: ಮಧ್ಯಕರ್ನಾಟಕಕ್ಕೆ ಶಾಶ್ವತ ಕುಡಿಯುವ ನೀರಿನ ಪೂರೈಕೆಗಾಗಿ ಭದ್ರ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 5300 ಕೋಟಿ ಅನುದಾನ ನೀಡುವ ಮೂಲಕ ರಾಜ್ಯಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಕರ್ನಾಟಕದ ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಇತರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗೆ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರು 5300 ಕೋಟಿ ಅನುದಾನ ನೀಡಿ, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ದಾರೆ. ಈ ಯೋಜನೆಯಿಂದ 5,57,022 ಎಕರೆ ಭೂ ಪ್ರದೇಶ ನೀರಾವರಿಗೆ […]

ಜ.31 ರಿಂದ ಏ. 6ರವರೆಗೆ ಕೇಂದ್ರ ಬಜೆಟ್ ಅಧಿವೇಶನ: ಪ್ರಹ್ಲಾದ್ ಜೋಶಿ

ನವದೆಹಲಿ: 2023ರ ಬಜೆಟ್ ಅಧಿವೇಶನ ಜನವರಿ 31ರಂದು ಆರಂಭಗೊಂಡು ಎಪ್ರಿಲ್ 6ರ ವರೆಗೆ ನಡೆಯಲಿದೆ. 27 ಅವಧಿಯ ಅಧಿವೇಶನ ಒಟ್ಟು 66 ದಿನಗಳವರೆಗೆ ನಡೆಯಲಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸದ ಈ ವಿಶೇಷ ಸಂದರ್ಭದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ, ಬಜೆಟ್ ಮಂಡನೆ ಹಾಗೂ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು. ಈ ಅಧಿವೇಶನದ ಸಂದರ್ಭದಲ್ಲಿ, ಸಂಸತ್ತಿನ ಸ್ಥಾಯಿ ಸಮಿತಿ ಎದುರಿರುವ ಹಲವು ರಾಜ್ಯಗಳ ಅನುದಾನಗಳ ಬೇಡಿಕೆ ಕುರಿತು ನಿರ್ಣಯ ಕೈಗೊಳ್ಳಲು ಹಾಗೂ ವಿವಿಧ ಸಚಿವಾಲಯಗಳಿಗೆ ಸಂಬಂಧಪಟ್ಟ […]