ಮಳೆಹಾನಿ ಅಧ್ಯಯನ: ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಭೇಟಿ

ಉಡುಪಿ: ರೈತರು ಬೆಳೆಯುವ ಪ್ರತಿಯೊಂದು ಬೆಳೆಗಳನ್ನೂ ಹಾಗೂ ಮೀನುಗಾರಿಕಾ ಬೋಟ್ ಹಾಗೂ ಪರಿಕರಗಳನ್ನು ವಿಮಾ ವ್ಯಾಪ್ತಿಗೆ ತರುವಂತೆ ಅವರುಗಳನ್ನು ಪ್ರೋತ್ಸಾಹಿಸಬೇಕು. ಇದರಿಂದ ವೈಯಕ್ತಿಕ ನಷ್ಟದ ಪ್ರಮಾಣವು ಕಡಿಮೆಯಾಗುತ್ತದೆ ಎಂದು ಕೇಂದ್ರ ಮಳೆಹಾನಿ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ಹೇಳಿದರು. ಅವರು ಗುರುವಾರ ಜಿಲ್ಲೆಯಲ್ಲಿ ಮಳೆಹಾನಿ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿ ಮಾತನಾಡಿದರು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಮತ್ತಿತರ ಬೆಳೆ ವಿಮೆಗೆ ಸರ್ಕಾರವು ಪ್ರೀಮಿಯಂ ಹಣವನ್ನು […]