ಕೇಂದ್ರ ಸಚಿವ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ
ನವದೆಹಲಿ: ಕೇಂದ್ರ ಸಚಿವ, ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಇಂದು ವಿಧಿವಶರಾಗಿದ್ದಾರೆ. 74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಕೆಲ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಇದೀಗ ಅವರು ಮೃತಪಟ್ಟಿದ್ದಾರೆ ಎಂದು ಪಾಸ್ವಾನ್ ಪುತ್ರ ಚಿರಾಗ್ ಮಾಹಿತಿ ನೀಡಿದ್ದಾರೆ. ಎಲ್‌ಜೆಪಿ ಮುಖ್ಯಸ್ಥ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು. ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ […]