ಆ. 18ಕ್ಕೆ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಉಡುಪಿಗೆ ಆಗಮನ
ಉಡುಪಿ: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಸರಕಾರದ ವಿವಿಧ ಜನಪರ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜನಾಶೀರ್ವಾದ ಯಾತ್ರೆ ನಡೆಯಲಿದೆ. ಇದೇ ಆಗಸ್ಟ್ 18ರಂದು ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಗೆ ಜನಾಶೀರ್ವಾದ ಯಾತ್ರೆ ಆಗಮಿಸಲಿದ್ದು, ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹೆಬ್ರಿಯಲ್ಲಿ ಯಾತ್ರೆಯನ್ನು ಸ್ವಾಗತಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]