ಅನ್ ಲಾಕ್ 4.0 ಮಾರ್ಗಸೂಚಿ ಪ್ರಕಟ: ಸೆ. 7ರಿಂದ ಮೆಟ್ರೋ ಆರಂಭ, ಶಾಲಾ ಕಾಲೇಜುಗಳಿಗಿಲ್ಲ ಅನುಮತಿ

ನವದೆಹಲಿ: ಕೇಂದ್ರ ಸರ್ಕಾರ ಅನ್ ಲಾಕ್ 4.0 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಸೆಪ್ಟೆಂಬರ್ 7ರಿಂದ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿದೆ. ಉಳಿದಂತೆ ಶಾಲಾ ಕಾಲೇಜು, ಚಿತ್ರಮಂದಿರ, ಈಜುಕೊಳ, ಮನೋರಂಜನಾ ಪಾರ್ಕ್ ಗಳಿಗೆ ವಿಧಿಸಿರುವ ನಿರ್ಬಂಧವನ್ನು ಮುಂದುವರಿಸಿದೆ. ಹೊಸ ಮಾರ್ಗಸೂಚಿಯಂತೆ ಸೆ.​​ 7ರಿಂದ ಕರ್ನಾಟಕದ ಬೆಂಗಳೂರು ಸೇರಿದಂತೆ ದೇಶದಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಆದರೆ, ಸೆಪ್ಬೆಂಬರ್‌ ತಿಂಗಳ ಅಂತ್ಯದವರೆಗೂ ಶಾಲಾ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಗಸೂಚಿಯ ಪ್ರಮುಖ ಅಂಶಗಳು: * ಸೆಪ್ಟೆಂಬರ್‌ […]