ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟ: ಅಕ್ಟೋಬರ್ 15ರಿಂದ ಶಾಲಾ ಕಾಲೇಜು, ಚಿತ್ರಮಂದಿರ ತೆರೆಯಲು ಅವಕಾಶ

ನವದೆಹಲಿ: ಕೇಂದ್ರ ಸರ್ಕಾರವು ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟಿಸಿದ್ದು, ಅಕ್ಟೋಬರ್ 15ರಿಂದ ಶಾಲಾ ಕಾಲೇಜು, ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿದೆ. ಈಜುಕೊಳ, ಮನೋರಂಜನಾ ಪಾರ್ಕ್ ತೆರೆಯಲು ಒಪ್ಪಿಗೆ ನೀಡಿದೆ. ಹೊಸ ಮಾರ್ಗಸೂಚಿಯಲ್ಲಿ ಚಿತ್ರಮಂದಿರ ತೆರೆಯಲು ಅವಕಾಶ ಕಲ್ಪಿಸಿದ್ದು, ಶೇ. 50 ವೀಕ್ಷಕರಿಗೆ ಅವಕಾಶ ನೀಡಲು ಅನುಮತಿ ನೀಡಲಾಗಿದೆ. ಶಾಲಾ ಕಾಲೇಜುಗಳನ್ನು ತೆರೆಯಲು ಅವಕಾಶ ಕಲ್ಪಿಸಿದ್ದು, ರಾಜ್ಯ ಸರ್ಕಾರಗಳು ಸಂಬಂಧಿಸಿದ ಶಿಕ್ಷಣ ಮಂಡಳಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದೆ.