ಉಡುಪಿ ಜಿಲ್ಲೆಯನ್ನು ಅನ್ ಲಾಕ್ ಮಾಡಿ: ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ
ಉಡುಪಿ: ಉಡುಪಿ ಜಿಲ್ಲೆಯನ್ನು ಅನ್ ಲಾಕ್ ಮಾಡುವಂತೆ ಮುಖ್ಯಮಂತ್ರಿ ಹಾಗೂ ಸರ್ಕಾರ ಮುಖ್ಯ ಕಾರ್ಯದರ್ಶಿ ಬಳಿ ಮನವಿ ಮಾಡುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಜಿಲ್ಲೆಯ ಆರ್ಥಿಕ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲೆಯ ವರ್ತಕರು ಹಾಗೂ ಸಾರ್ವಜನಿಕರು ಅನ್ ಲಾಕ್ ಮಾಡುವಂತೆ ಕೇಳಿಕೊಂಡಿದ್ದಾರೆ. ಹಾಗಾಗಿ ಜಿಲ್ಲೆಯನ್ನು ಅನ್ ಲಾಕ್ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿನ್ನೆ ಕರೆ ಮಾಡಿ ವಿನಂತಿ ಮಾಡಿಕೊಂಡಿದ್ದೆ. ಅವರು ಜಿಲ್ಲೆಯ ಹೆಲ್ತ್ ಬುಲೆಟಿನ್ ತರಿಸಿಕೊಂಡು ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ […]