ಉಡುಪಿ ಜಿಲ್ಲೆಯಲ್ಲಿ ಅನ್‌ಲಾಕ್ ಹೇಗಿರುತ್ತೆ?ಯಾವುದಕ್ಕೆಲ್ಲಾ ಅನ್ ಲಾಕ್ ಭಾಗ್ಯ?ಇಲ್ಲಿದೆ ಮಾಹಿತಿ

ಉಡುಪಿ: ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ , ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲೆಯಲ್ಲಿ ಅನ್‌ಲಾಕ್ ಸಮಯದಲ್ಲಿ ಕೈಗೊಳ್ಳಬಹುದಾದ ಚಟುವಟಿಕೆಗಳ ಸಮರ್ಪಕ ಅನುಷ್ಠಾನ ಮಾಡುವ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ […]