ರಾಜ್ಯದಲ್ಲಿ ಮುಂದಿನ ವಾರದಿಂದ ಅನ್ ಲಾಕ್ ಪ್ರಕ್ರಿಯೆ ಶುರು: ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರದಿಂದ ಅನ್‌ಲಾಕ್ ಪ್ರಕ್ರಿಯೆ ಶುರುವಾಗುವುದು ಖಚಿತಗೊಂಡಿದ್ದು, ನಾಲ್ಕರಿಂದ ಐದು ಹಂತಗಳಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಸಲು ಸರ್ಕಾರ ನಿರ್ಧರಿಸಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಸುಳಿವು ನೀಡಿದರು. ಒಮ್ಮೆಲೆಯೇ ತೆರವುಗೊಳಿಸಿದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುವ ಅಪಾಯವಿದೆ. ಹೀಗಾಗಿ ಹಂತ ಹಂತವಾಗಿ ನಿರ್ಬಂಧಗಳನ್ನು ತೆರವುಗೊಳಿಸಲಾಗುತ್ತದೆ ಎಂದರು. ಮೊದಲ ಹಂತದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ನಿಗದಿಪಡಿಸಿದ ಸಮಯವನ್ನು 12 ಗಂಟೆಯವರೆಗೆ ವಿಸ್ತರಿಸಲಾಗುತ್ತದೆ. ವ್ಯಾಯಾಮ ಮತ್ತು […]