ಪ್ರಶಿಕ್ಷಣ ವರ್ಗದಿಂದ ಮೌಲ್ಯಾಧಾರಿತ ವಿಚಾರಧಾರೆಗಳ ಅನಾವರಣ: ಕುಯಿಲಾಡಿ
ಉಡುಪಿ: ಪ್ರಶಿಕ್ಷಣ ವರ್ಗದ ಮೂಲಕ ಮೌಲ್ಯಾಧಾರಿತ ವಿಚಾರಧಾರೆಗಳ ಅನಾವರಣ ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಬಿಜೆಪಿಯ ಸೂಚನೆಯಂತೆ ನ. 15ರೊಳಗೆ ಜಿಲ್ಲೆಯ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ ಪಕ್ಷದ ಪದಾಧಿಕಾರಿಗಳಿಗೆ ನಡೆಯಲಿರುವ ಪ್ರಶಿಕ್ಷಣ ವರ್ಗದ ಮೂಲಕದ ಹಿರಿಯರ ಮಾರ್ಗದರ್ಶನ, ಪಕ್ಷದ ಇತಿಹಾಸ, ಸಂಘಟನೆ ಮುಂತಾದ ವಿಚಾರವನ್ನು ತಿಳಿಸಬಹುದು ಎಂದರು. ಮೂರು ವರ್ಷಗಳ ಅವಧಿಗೆ ಆಯ್ಕೆಯಾಗಿರುವ […]