ಉಪೇಂದ್ರ ನಿರ್ದೇಶನದ ಹನ್ನೊಂದನೇ ಚಿತ್ರ UI ಟೀಸರ್ ನಿಮ್ಮ ಕಲ್ಪನೆಗಾಗಿ….

ಉಪೇಂದ್ರ ಅವರ ಅಭಿಮಾನಿಗಳು ಅವರ ಚಿತ್ರ UI ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಉಪೇಂದ್ರ ನಿರ್ದೇಶನದ ಹನ್ನೊಂದನೇ ಚಿತ್ರವು 100 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಬಜೆಟ್‌ನಲ್ಲಿ ತಯಾರಾಗುತ್ತಿದೆ ಎಂದು ವರದಿಯಾಗಿದೆ. ಚಿತ್ರದ ನಿರ್ಮಾಪಕರು ಸೋಮವಾರ ಅದರ ಟೀಸರ್ ಅನ್ನು ಬಿಡುಗಡೆ ಮಾಡಿದ್ದು ಅತ್ಯಂತ ಕುತೂಹಲಕಾರಿಯಾಗಿದೆ. ಸದಾ ಹೊಸತನ್ನು ನೀಡುವ ಉಪೇಂದ್ರ ಈ ಬಾರಿಯೂ ಏನೋ ಹೊಸತು ನೀಡಲು ತಯಾರಾಗಿದ್ದಾರೆ. ಈ ಟೀಸರ್ ನಿಮ್ಮ ಕಲ್ಪನೆಗಾಗಿ ಎಂಬ ಅಡಿಬರಹ ಟೀಸರ್ ಜೊತೆ ಇದೆ. , UI ಮುಂಬರುವ ಪ್ಯಾನ್-ಇಂಡಿಯಾ ಚಲನಚಿತ್ರವಾಗಿದ್ದು, ಲಹರಿ […]

ಚಿತ್ರನಟ ಉಪೇಂದ್ರ ನಿವಾಸಕ್ಕೆ ಪಲಿಮಾರು ಮಠ ಶ್ರೀವಿದ್ಯಾಧೀಶ ತೀರ್ಥರಿಂದ ಭೇಟಿ

ಉಡುಪಿ: ಚಿತ್ರನಟ ಉಪೇಂದ್ರ ಅವರ ಆಹ್ವಾನದ ಮೇರೆಗೆ ಪಲಿಮಾರು ಮಠದ ಹಿರಿಯ ಶ್ರೀಗಳಾದ ಶ್ರೀವಿದ್ಯಾಧೀಶ ಸ್ವಾಮೀಜಿ ಅವರು ತಮ್ಮ ಶಿಷ್ಯವೃಂದದೊಂದಿಗೆ ಅವರ ಮನೆಗೆ ತೆರಳಿದರು. ಉಪೇಂದ್ರ ಅವರು ಕೇಳಿದ ಆಧ್ಯಾತ್ಮದ ಪ್ರಶ್ನೆಗಳಿಗೆ ಉತ್ತರಿಸಿದ ಶ್ರೀಗಳು, ಉಪೇಂದ್ರ ಅವರನ್ನು ರಜತಪೀಠಪುರಕ್ಕೆ ಹಾಗೂ ಪಲಿಮಾರಿನ ಮೂಲ ಮಠಕ್ಕೆ ಭೇಟಿ ನೀಡುವಂತೆ ಆಹ್ವಾನವಿತ್ತರು. ಮಠದ ಪಿ.ಆರ್.ಓ ಕಡೆಕಾರು ಶ್ರೀಶ ಭಟ್, ಗಿರೀಶ್ ಉಪಾಧ್ಯಾಯ, ಶ್ರೀನಿವಾಸ ಭಟ್ ಮತ್ತಿತರು ಉಪಸ್ಥಿತರಿದ್ದರು.

ರಿಯಲ್ ಸ್ಟಾರ್ ಉಪೇಂದ್ರ ಅವರ “ಬುದ್ದಿವಂತ-2” ಚಿತ್ರದ ಪೋಸ್ಟರ್ ಬಿಡುಗಡೆ   

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ “ಬುದ್ಧಿವಂತ-2” ಹೆಸರಿನಲ್ಲಿ ಮತ್ತೊಂದು ಸಿನಿಮಾ ಬರುತ್ತಿದ್ದು, ವಿಶೇಷವಾಗಿ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಎರಡು ಪೋಸ್ಟರ್ ಗಳ ಮೂಲಕ ಉಪೇಂದ್ರ ದರ್ಶನವನ್ನು ನಿರ್ದೇಶಕರು ಮಾಡಿಸಿದ್ದಾರೆ. ಎರಡೂ ಪೋಸ್ಟರ್ ಗಳು ಒಂದಷ್ಟು ಕುತೂಹಲ ಹುಟ್ಟಿಸಿವೆ. ಮೌರ್ಯ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ನಟಿ ಸೋನಾಲ್ ಹಾಗೂ ಮೇಘನಾ ರಾಜ್ ಚಿತ್ರದ ನಾಯಕಿಯರಾಗಿದ್ದು, ನಟ ಆದಿತ್ಯ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬುದ್ಧಿವಂತ 2 ಎಂಬ ಹೆಸರಿನ ಕಾರಣ ಸಿನಿಮಾದ ಮೇಲೆ ನಿರೀಕ್ಷೆ ದೊಡ್ಡದಾಗಿದೆ.  […]

ಲೋಕಸಭೆ ಚುನಾವಣೆ: ಎರಡನೇ ಹಂತದಲ್ಲಿ ಯುಪಿಪಿ ಪಕ್ಷದಿಂದ 14 ಮಂದಿ ಕಣಕ್ಕೆ: ಉಪೇಂದ್ರ

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಈಗಾಗಲೇ  ಪಕ್ಷದ 14 ಮಂದಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದು, ಎರಡನೆ ಹಂತದಲ್ಲಿ ಮತ್ತೆ 14 ಮಂದಿಯ ಅಭ್ಯರ್ಥಿಯ ಹೆಸರನ್ನು ಎ.7ರ ನಂತರ ಘೋಷಣೆ ಮಾಡಲಾಗುವುದು ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ಚಿತ್ರನಟ ಉಪೇಂದ್ರ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರಗಳಿಗೂ ಭೇಟಿ ನೀಡಿ ಅಭ್ಯರ್ಥಿಗಳನ್ನು ಮಾಧ್ಯಮದ ಮೂಲಕ ಜನರಿಗೆ ಪರಿಚಯಿಸಿ ಪಕ್ಷ ವಿಚಾರವನ್ನು ತಿಳಿಸುವ ಕಾರ್ಯ ಮಾಡುತ್ತಿದ್ದೇನೆ. ನಮ್ಮ ಪಕ್ಷ ವಿಭಿನ್ನ ಅಲ್ಲ. ಇಂದಿನ ಸುಳ್ಳಿನ […]