ಉಪ್ಪಿನಂಗಡಿ: ಟ್ಯಾಂಕರ್ ನಿಂದ ಧಿಡೀರ್ ಅನಿಲ್ ಸೋರಿಕೆ; ಆತಂಕ

ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. […]