ಉಪ್ಪಿನಂಗಡಿ: ಐವರು ಅತ್ಯಾಚಾರ ಆರೋಪಿಗಳ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ಬಂಧಿಸಲಾಗಿದೆ. 5 ಮಂದಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಚಂದ್ರಾಕ್ಷ, ಸಂದೀಪ್ ಕುಮಾರ್, ಹರ್ಷ ಯಾನೆ ರವಿ, ಲವ ಕುಮಾರ್ ಯಾನೆ ಲವ ಹಾಗೂ ಲಕ್ಷ್ಮೀಶ ಯಾನೆ ಚರಣ್ ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿ ಚಂದ್ರಾಕ್ಷ ಎಂಬಾತನ ಮೇಲೆ ಬಾಲಕಿಯ ಅಪಹರಣ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದರೆ, ಉಳಿದ ಆರೋಪಿಗಳ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. […]