ಉಪ್ಪುಂದ:ಕಲುಷಿತ ನೀರು ಕುಡಿದು ನೂರಾರು ಮಂದಿ ಅಸ್ವಸ್ಥ

ಉಡುಪಿ: ಕಲುಷಿತ ನೀರು ಕುಡಿದು ನೂರಾರು ಮಂದಿ ಗ್ರಾಮಸ್ಥರು ಅಸ್ವಸ್ಥಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಮತ್ತು 7ನೇ ವಾರ್ಡ್ ನಲ್ಲಿ ಕುಡಿಯುವ ನೀರು ಕಲುಷಿತಗೊಂಡಿದೆ. ಇಲ್ಲಿನ ಕಾಸಿನಾಡಿ ಎಂಬಲ್ಲಿರುವ ಟ್ಯಾಂಕ್ ನಿಂದ ಬಿಡಲಾಗುವ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಪರಿಣಾಮ ಕರ್ಕಿ ಕಳ್ಳಿ ಮತ್ತು ಮಡಿಕಲ್ ಎನ್ನುವ ಪ್ರದೇಶದಲ್ಲಿ ನೂರಾರು ಮಂದಿ ಅಸ್ವಸ್ಥಗೊಂಡಿದ್ದಾರೆ. ವಾರ್ಡ್ ನ […]