ಯು ಪಿ ಎಸ್ ಸಿ ಫಲಿತಾಂಶ: ಬಾಲಕಿಯರದ್ದೇ ಮೇಲುಗೈ, ಮೊದಲ ಮೂರು ಸ್ಥಾನಗಳು ಹುಡುಗಿಯರ ಪಾಲು

ಸೋಮವಾರ ಯು ಪಿ ಎಸ್ ಸಿ ಫಲಿತಾಂಶ ಪ್ರಕಟವಾಗಿದ್ದು, ಮೊದಲ ಮೂರು ಸ್ಥಾನಗಳನ್ನು ಹುಡುಗಿಯರು ಪಡೆದುಕೊಂಡಿದ್ದಾರೆ. ಶ್ರುತಿ ಶರ್ಮಾ ಮೊದಲ ಸ್ಥಾನ, ಅಂಕಿತಾ ಅಗರ್ವಾಲ್ ಎರಡನೇ ಸ್ಥಾನ ಮತ್ತು ಗಾಮಿನಿ ಸಿಂಗ್ಲಾ ಮೂರನೇ ಸ್ಥಾನ ಪಡೆದಿದ್ದಾರೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಕಾರ, ಸುಮಾರು 685 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ತೇರ್ಗಡೆಯಾಗದವರ ಬಗ್ಗೆ ಸಹಾನುಭೂತಿ ವ್ಯಕ್ತ ಪಡಿಸಿರುವ ಪ್ರಧಾನಿ , “ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗದವರ ನಿರಾಶೆಯನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇನೆ ಆದರೆ ಇವರು […]