ಕೊರೊನಾ ತಗುಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ತೀವ್ರ ಉಸಿರಾಟ ಸಮಸ್ಯೆ
ವಾಷಿಂಗ್ಟನ್: ಕೊರೊನಾ ಸೋಂಕು ತಗುಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಸಿಎನ್‌ಎನ್ ಸುದ್ದಿ ವಾಹಿನಿ ವರದಿ ಮಾಡಿದೆ. ಕೋವಿಡ್–19 ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಅವರು ತೀವ್ರ ಆಯಾಸದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ಕೆಲವು ದಿನಗಳ ವರೆಗೆ ಟ್ರಂಪ್ ಆಸ್ಪತ್ರೆಯಲ್ಲೇ ಇದ್ದುಕೊಂಡು ಚಿಕಿತ್ಸೆ ಪಡೆಯಲಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.