ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌: ರಜತ ಪದಕ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ

ಅಮೇರಿಕಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಇಂದು ಬೆಳಗ್ಗೆ ಒರೆಗಾನ್‌ನ ಯುಜೀನ್‌ನಲ್ಲಿ ನಡೆದ ಸ್ಪರ್ಧೆಯ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಜಾವೆಲಿನ್ ಎಸೆದು ಎರಡನೇ ಸ್ಥಾನ ಪಡೆದಿದ್ದಾರೆ. ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಜಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ನಂತರ […]

ಅಮೇರಿಕಾದ ಒರೆಗಾನ್‌ನಲ್ಲಿ ಚೊಚ್ಚಲ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

ಅಮೇರಿಕಾದ ಒರೆಗಾನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಥ್ರೋ ನಲ್ಲಿ 88.39 ಮೀಟರ್‌ಗಳ ಎಸೆತದೊಂದಿಗೆ ಭಾರತ ನೀರಜ್ ಚೋಪ್ರಾ ಫೈನಲ್‌ ಗೆ ಅರ್ಹತೆ ಪಡೆದಿದ್ದಾರೆ. ಒಲಿಂಪಿಕ್ ಚಿನ್ನದ ಪದಕ ವಿಜೇತ ಚೋಪ್ರಾ, ಅರ್ಹತಾ ಸುತ್ತಿನ ಮೊದಲ ಎಸೆತದಲ್ಲೇ ಫೈನಲ್‌ನ ತಮ್ಮ ಸ್ಥಾನವನ್ನು ಭದ್ರಪಡಿಸಿದ್ದಾರೆ. ಅರ್ಹತಾ ಸುತ್ತಿನ ಎ ಗುಂಪಿನಲ್ಲಿ ಚೋಪ್ರಾ ಮೊದಲಿಗರಾಗಿ ಜಾವಲಿನ್ ಎಸೆದಿದ್ದಾರೆ. ನಾಳೆ ಮುಂಜಾನೆ ನಡೆಯಲಿರುವ ಫೈನಲ್‌ನಲ್ಲಿ 24 ವರ್ಷ ವಯಸ್ಸಿನ ಚೋಪ್ರಾ ಸ್ಪರ್ಧಿಸಲಿದ್ದಾರೆ. ನೀರಜ್ ಜೊತೆಗೆ ರೋಹಿತ್ ಯಾದವ್ ಕೂಡ […]

ಮೇಡ್ ಇನ್ ಇಂಡಿಯಾ ಟೆಸ್ಲಾ ಇವಿ ಕಾರಿಗೆ ಕೂಡಿ ಬಂದಿಲ್ಲ ಕಾಲ: ಮೊದಲು ಮಾರಾಟ ಮತ್ತು ಸೇವೆಗೆ ಪಟ್ಟು ಹಿಡಿದ ಮಸ್ಕ್!

ನವದೆಹಲಿ: “ಕಾರುಗಳನ್ನು ಮಾರಾಟ ಮಾಡಲು ಮತ್ತು ಸೇವೆ ನೀಡಲು ಮೊದಲು ನಮಗೆ ಅನುಮತಿ ನೀಡದ ಹೊರತು ಭಾರತದ ಯಾವುದೇ ಸ್ಥಳದಲ್ಲಿ ಟೆಸ್ಲಾ ಉತ್ಪಾದನಾ ಘಟಕವನ್ನು ಹಾಕುವುದಿಲ್ಲ” ಎಂದು ಎಲೆಕ್ಟ್ರಿಕ್ ಕಾರು ಟೆಸ್ಲಾದ ನಿರ್ಮಾತ ಏಲನ್ ಮಸ್ಕ್ ಹೇಳಿದ್ದಾರೆ. ಟೆಸ್ಲಾ ಸಂಸ್ಥಾಪಕರು ಭಾರತದಲ್ಲಿ ಇವಿ ಕಾರುಗಳನ್ನು ತಯಾರಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ, ಮಾರಾಟ ಮತ್ತು ಸೇವೆಯನ್ನು ಅನುಮತಿಸುವವರೆಗೆ, ಭಾರತದಲ್ಲಿ ಯಾವುದೇ ಸ್ಥಾವರವನ್ನು ಸ್ಥಾಪಿಸುವುದಿಲ್ಲ ಎಂದು ಟ್ವಿಟರ್ ಬಳಕೆದಾರರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. 2016 ರಿಂದಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲು […]

ಯುರೋಪ್ ಅಮೇರಿಕಾಗಳಲ್ಲಿ ಹೆಚ್ಚುತ್ತಿರುವ ಮಂಕಿ ಪಾಕ್ಸ್ ಪ್ರಕರಣ: ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ಎಂದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ಇಟಲಿ, ನೆದರ್‌ಲ್ಯಾಂಡ್ಸ್, ಪೋರ್ಚುಗಲ್, ಸ್ಪೇನ್, ಸ್ವೀಡನ್, ಯುನೈಟೆಡ್ ಸ್ಟೇಟ್ಸ್, ಕೆನಡಾ, ಆಸ್ಟ್ರೇಲಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಹಲವಾರು ದೇಶಗಳಲ್ಲಿ ಮಂಗನ ಸಿಡುಬು ಕಾಯಿಲೆಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಕೋವಿಡ್-19 ರ ಸಂಕಟ ಇನ್ನೂ ಮುಗಿದಿಲ್ಲದಿರುವ ಈ ವೇಳೆಯಲ್ಲಿ ಜಗತ್ತು ಮತ್ತೊಂದು ಸಾಂಕ್ರಾಮಿಕಕ್ಕೆ ಬಲಿಯಾಗುತ್ತಿದೆಯೆ ಎನ್ನುವ ಅನುಮಾನ ಹಲವರನ್ನು ಕಾಡುತ್ತಿದೆ. ಈ ಮಧ್ಯೆ ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಿ, ಮಂಕಿಪಾಕ್ಸ್ ಪೀಡಿತ ದೇಶಗಳಿಗೆ ಪ್ರಯಾಣದ ಇತಿಹಾಸ ಹೊಂದಿರುವ ಯಾವುದೇ ಅಸ್ವಸ್ಥ ಪ್ರಯಾಣಿಕರನ್ನು […]

ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಯೆ ವ್ಲಾದಿಮಿರ್ ಪುತಿನ್? ಆಡಿಯೊ ಟೇಪ್‌ನಲ್ಲಿ ಬಹಿರಂಗವಾಯಿತೆ ಪುತಿನ್ ಅನಾರೋಗ್ಯದ ವಿಷಯ?!

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ ಎಂದು ಬ್ರಿಟನ್ ನ ಮಾಜಿ ಗೂಢಚಾರಿ ಕ್ರಿಸ್ಟೋಫರ್ ಸ್ಟೀಲ್ ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ ಕುರಿತು ದಸ್ತಾವೇಜನ್ನು ಬರೆದಿದ್ದ ಮತ್ತು 2016 ರ ಅಮೇರಿಕಾ ಚುನಾವಣಾ ಪ್ರಚಾರದಲ್ಲಿ ರಷ್ಯಾದ ಹಸ್ತಕ್ಷೇಪವನ್ನು ಆರೋಪಿಸಿದ್ದ ಸ್ಟೀಲ್, ಸ್ಕೈ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, “ನಿಸ್ಸಂಶಯವಾಗಿ, ರಷ್ಯಾ ಮತ್ತು ಬೇರೆಡೆಯ ಮೂಲಗಳಿಂದ ನಾವು ಕೇಳುತ್ತಿರುವ ಪ್ರಕಾರ, ಪುಟಿನ್ ವಾಸ್ತವವಾಗಿ ತೀವ್ರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ” ಎಂದಿದ್ದಾರೆ. ಇವೆಲ್ಲದರ ನಡುವೆ, ರಷ್ಯಾದ ಮಿತ್ರ ಜನತಂತ್ರದ ಸದಸ್ಯರೊಬ್ಬರು ಪುತಿನ್ […]