ಯುವಜನತೆ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಯುವಜನತೆ ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಆಯ್ಕೆಯ ಉದ್ಯೋಗ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು, ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ &  ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ, ಉಡುಪಿ ಐ.ಎಮ್.ಸಿ, […]