ಸಚಿವನಾಗಿ ಉತ್ತಮ ‌ಕಾರ್ಯ ನಿರ್ವಹಿಸಿದ್ದೇನೆ: ಖಾದರ್

ಮಂಗಳೂರು: ವಿಶ್ವಾಸ ಮತಯಾಚನೆಯಲ್ಲಿ ನಮಗೆ ಸೋಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇನೆ. ಸಚಿವನಾಗಿ ಉತ್ತಮ ಕಾರ್ಯ ಮಾಡಿದ್ದೇನೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶೇಷ ಅನುದಾನವನ್ನು ಜಿಲ್ಲೆಗೆ ತಂದಿದ್ದೇನೆ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಒಂದೊಂದು ಕ್ಷೇತ್ರಕ್ಕೆ ೬ ಕೋಟಿ ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿ, ಲೈವ್ ಬ್ಯಾಂಡ್, ಇಸ್ವಿಟ್ ಇವುಗಳನ್ನು ಬಂದ್ ಮಾಡಿಸಿದ್ದೇನೆ. ಕಳೆದ ಒಂದು ವರ್ಷದಿಂದ ಮರಳು ಮಾಫಿಯಾದ ವಿರುದ್ಧ ಕ್ರಮಕೈಗೊಂಡಿದ್ದೇನೆ. […]

ಪತ್ರಕರ್ತರ ಸಮ್ಮೇಳನ‌: ಚಿತ್ರಕಲಾ ‌ಪ್ರದರ್ಶನ‌ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಏರ್ಪಡಿಸಿದ ಚಿತ್ರಕಲಾ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಚಿತ್ರ ಬಿಡಿಸುವ ಮೂಲಕ ಉದ್ಘಾಟಿಸಿದರು.

ಮಂಗಳೂರು: ಕಡಲ್ಕೊರೆತದ ಪ್ರದೇಶಗಳಿಗೆ ಸಚಿವ ಆರ್.ವಿ. ದೇಶಪಾಂಡೆ ಭೇಟಿ

ಮಂಗಳೂರು: ಕೆಲ ದಿನಗಳ ಹಿಂದೆ ವಾಯುಬಾರ ಕುಸಿತದ ಪರಿಣಾಮವಾಗಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡು ಕಡಲ್ಕೊರೆತ ಉಂಟಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ‌ ನೀಡಿದರು. ಕಡಲ ತೀರದ ಕೆಲ ಮನೆಗಳಿಗೆ ಹಾನಿಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಕಡಲ್ಕೊರೆತದಿಂದ ತೊಂದರೆಗೊಳಗಾದ ಜನರಿಗೆ ಹೆಚ್ಚಿನ ಪರಿಹಾರದ ಭರವಸೆ ನೀಡಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಹ/ಬರ ಪರಿಹಾರ ಕ್ರಮಗಳು ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಮಂಗಳೂರು: ಕಡಲ್ಕೊರೆತ ಪ್ರದೇಶಗಳಿಗೆ ಸಚಿವ ಖಾದರ್ ಭೇಟಿ

ಮಂಗಳೂರು: ಉಳ್ಳಾಲ ಭಾಗದದಲ್ಲಿ ಕಡಲ್ಕೊರೆತಕ್ಕೆ ಒಳಗಾದ ವಿವಿಧ ಭಾಗಗಳಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಭೇಟಿ ನೀಡಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆಗೆ ಭೇಟಿ ನೀಡಿದ ಸಚಿವರು ಪರಿಶೀಲನೆ ನಡೆಸಿ,  ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಈಗಾಗಲೇ ಉಲ್ಲಾಳ ಸುತ್ತಮುತ್ತಲ ಪ್ರದೇಶಗಳಾದ ಕೈಕೋ, ಕಿಲ್ಲೆರೀಯಾ, ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಹಲವು ಮನೆಗಳು ಅಪಾಯದಲ್ಲಿವೆ.