ಮೂರು ಮಕ್ಕಳ ತಾಯಿ ಪಿಯುಸಿ ಹುಡುಗನನ್ನು ವರಿಸಿದಳು.!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ಮೂರು ಮಕ್ಕಳನ್ನು ಹೊಂದಿರುವ 30 ವರ್ಷದ ಮುಸ್ಲಿಂ ಮಹಿಳೆಯೊಬ್ಬರು ಧಾರ್ಮಿಕ ಸಮಾರಂಭದಲ್ಲಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು, 12ನೇ ತರಗತಿಯ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ಮಹಿಳೆಯನ್ನು ಶಬ್ನಮ್ ಎಂದು ಗುರುತಿಸಲಾಗಿದ್ದು, ಆಕೆ ಮತಾಂತರದ ಬಳಿಕ ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿಕೊಂಡಿದ್ದಾಳೆ. ಆಕೆಯ ಪೋಷಕರು ಮೃತಪಟ್ಟಿದ್ದು. ಈ ಹಿಂದೆ ಎರಡು ಬಾರಿ ವಿವಾಹವಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಯಲ್ಲಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಕಾನೂನುಬಾಹಿರ […]