ಉತ್ತರ ಕನ್ನಡ ಜಿಲ್ಲೆಯಲ್ಲಿ 6 ವರ್ಷದಲ್ಲಿ 13 ಕನ್ನಡ ಶಾಲೆಗಳಿಗೆ ಬೀಗ

ಕಾರವಾರ (ಉತ್ತರ ಕನ್ನಡ) :ಸರ್ಕಾರಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲಿ ಸರ್ಕಾರಿ ಶಾಲೆಗಳು ಅವನತಿಯತ್ತ ಸಾಗಿದ್ದು, ಕಳೆದ 6 ವರ್ಷಗಳಲ್ಲಿ ಬರೋಬ್ಬರಿ 13 ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳೇ ಇಲ್ಲದೇ ಬಾಗಿಲು ಮುಚ್ಚಿವೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ.ಕಾರವಾರದಲ್ಲಿ ಕನ್ನಡ ಶಾಲೆಗಳು ಅವನತಿಯತ್ತ ಸಾಗುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆ ಕೂಡ ಇಳಿಕೆಯಾಗಿದೆ. ಹೌದು, ಕಾರವಾರ ಕರ್ನಾಟಕದ ಗಡಿ ಪ್ರದೇಶವಾಗಿದ್ದು, […]