ಉತ್ತರಾಖಂಡದಲ್ಲಿ ಭೀಕರ ಅಪಘಾತ : ಕಂದಕಕ್ಕೆ ಉರುಳಿ ಬಿದ್ದ ಯತ್ರಾರ್ಥಿಗಳ ಬಸ್

ಉತ್ತರಕಾಶಿ(ಉತ್ತರಾಖಂಡ): ಇಲ್ಲಿನ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗುಜರಾತ್‌ನಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಗಂಗೋತ್ರಿ ಹೆದ್ದಾರಿಯ ಗಂಗ್ನಾನಿ ಎಂಬಲ್ಲಿ ಆಳವಾದ ಕಮರಿಗೆ ಬಿದ್ದಿದೆ. ಬಸ್ ಗಂಗೋತ್ರಿಧಾಮದಿಂದ ಉತ್ತರಕಾಶಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆ ಖಚಿತಪಡಿಸಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್​ ಮೂಲಕ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಭಾನುವಾರ ಸಂಜೆ 4:15 ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಉತ್ತರಾಖಂಡದಲ್ಲಿ ಖಾಸಗಿ […]