24 ಗಂಟೆಗಳಲ್ಲಿ 19 ಮಂದಿ ಸಾವು ; ಉತ್ತರ ಪ್ರದೇಶದಲ್ಲಿ ವರುಣಾರ್ಭಟ

ಲಕ್ನೋ (ಉತ್ತರ ಪ್ರದೇಶ): ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ನಿರಂತರ ಮಳೆಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಕೆಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿ ಪ್ರತ್ಯೇಕ ಅವಘಡಗಳಲ್ಲಿ ಹಲವರು ಸಾವಿಗೀಡಾಗಿದ್ದಾರೆ. ರಾಜ್ಯದ ಕೆಲವೆಡೆ ಮೇಲ್ಛಾವಣಿ ಕುಸಿತ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣಗಳು ವರದಿಯಾಗಿವೆ. ರಾಜಧಾನಿ ಲಕ್ನೋದ ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. […]