ಗ್ರಾಮಕರಣಿಕರ ಹುದ್ದೆ ನೇಮಕಾತಿಯಲ್ಲಿ ಆಮಿಷಕ್ಕೆ ಒಳಗಾಗಬೇಡಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ 2019 ನೇ ಸಾಲಿನ ಗ್ರಾಮಕರಣಿಕರ ಹುದ್ದೆಗೆ ನೇರ ನೇಮಕಾತಿ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಸರಕಾರದ ಮಾರ್ಗಸೂಚಿಯಡಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು ಪರಿಗಣಿಸಿ, ನೇರ ನೇಮಕಾತಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಪ್ರಕ್ರಿಯೆಯಲ್ಲಿ ನೇರ ಸಂದರ್ಶನ, ಲಿಖಿತ ಪರೀಕ್ಷೆ ಇತ್ಯಾದಿಗಳು ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮೂಲಕ ಆನ್‍ಲೈನ್ ಅರ್ಜಿಯನ್ನು ಸಲ್ಲಿಸುವಂತೆ ಹಾಗೂ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯುವುದರಿಂದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಆಮೀಷಕ್ಕೆ ಒಳಗಾಗದಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]