ಮಿಯ್ಯಾರು: ಜ. 8 ಮತ್ತು 9 ರಂದು ರಾಜ್ಯಮಟ್ಟದ ಗ್ರಾಮೀಣ ಕಂಬಳ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಮಿಯ್ಯಾರು ಕಂಬಳ ಸಮಿತಿ ಹಾಗೂ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ರಾಜ್ಯಮಟ್ಟದ ಗ್ರಾಮೀಣ ಕಂಬಳ ಕ್ರೀಡಾಕೂಟ ಮತ್ತು ಲವಕುಶ ಜೋಡುಕೆರೆ ಬಯಲು ಕಂಬಳವು ಜನವರಿ 8 ಮತ್ತು 9 ರಂದು ಮಿಯ್ಯಾರು ಲವಕುಶ ಜೋಡುಕೆರೆ ಬಯಲು ಕಂಬಳದಲ್ಲಿ ನಡೆಯಲಿದೆ. ಜ. 8 ರಂದು ಸಭಾ ವೇದಿಕೆ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ ಮತ್ತು ಪರಿಸರ ಜೀವಿಶಾಸ್ತ್ರ ಇಲಾಖೆ ಸಚಿವ […]

ಕೆ.ಪಿ.ಟಿ.ಸಿ.ಎಲ್ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಪ್ರಕಟ

ಬೆಂಗಳೂರು: ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಇಂಧನ ಸಚಿವ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸುತ್ತೇನೆ. ಫಲಿತಾಂಶವನ್ನು ತಿಳಿಯಲು  https://cetonline.karnataka.gov.in/kea/kptcl2022 ಲಿಂಕ್ ಅನ್ನು […]

ಸರ್ಕಾರಿ ಇಲಾಖೆಗಳಲ್ಲಿ ಕೃಷಿಕರ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆ ನೀಡಿ: ವಿ ಸುನೀಲ್ ಕುಮಾರ್

ಉಡುಪಿ: ದೇಶದ ಬೆನ್ನುಲುಬಾದ ರೈತರು ಇತ್ತೀಚಿನ ದಿನಗಳಲ್ಲಿ ಅನೇಕ ಸಮಸ್ಯೆಗಳಿಂದ ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರುತ್ತಿಲ್ಲ ಕೃಷಿಕರ ಆದಾಯವನ್ನು ದ್ವಿಗುಣಗೊಳಿಸಲು ಸರ್ಕಾರವು ಪ್ರಯತ್ನಿಸುತ್ತಿದೆ. ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಯಾಂತ್ರೀಕರಣ ಹಾಗೂ ಆಧುನಿಕತೆಯನ್ನು ಬೆಳಸಿಕೊಂಡಲ್ಲಿ ಹೆಚ್ಚಿನ ಲಾಭ ಪಡೆಯಲು ಸಾಧ್ಯ. ಸರ್ಕಾರಿ ಇಲಾಖೆಗಳಲ್ಲಿ ರೈತರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸೂಚನೆ ನೀಡಿದರು. ಅವರು ಸೋಮವಾರದಂದು ರಜತಾದ್ರಿಯ ಜಿಲ್ಲಾ […]

ಕಿಶೋರ ಯಕ್ಷಗಾನ ಸಂಭ್ರಮ -2022 ಸಮಾರೋಪ ಸಮಾರಂಭ; ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ,ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ಕಿಶೋರ ಯಕ್ಷಗಾನ ಸಂಭ್ರಮ -2022ರ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನು ನೀಡಿದ ಗುರುಗಳನ್ನು ಸನ್ಮಾನಿಸಿದರು. ಕರ್ನಾಟಕದ ಗಂಡು ಕಲೆಯಾದ ಯಕ್ಷಗಾನವು ಹಿಂದಿನ ಅಶಿಕ್ಷಿತ ಜನತೆಗೆ ದೇವರ ಪರಿಚಯ ಮತ್ತು ಪುರಾಣಗಳ ಸಾರವನ್ನು ತಿಳಿಸಿದೆ. ಈಗಿನ ಪ್ರಜೆಗಳಿಗೆ ಅಧ್ಯಾತ್ಮದ ಬಗ್ಗೆ ತಿಳಿಯಲು ಇದು ಉತ್ತಮವಾದ […]

ಡಿಸೆಂಬರ್ 11 ರಂದು ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಸಾಧನೆಯನ್ನು ಮಾಡಿರುವ ಶಾಲೆ, ಕಾಲೇಜುಗಳನ್ನು ಗುರುತಿಸಿ, ಗೌರವಿಸುವ ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕ ಪ್ರಶಸ್ತಿ ಕಾರ್ಯಕ್ರಮವು ಡಿಸೆಂಬರ್ 11 ರಂದು ಮಧ್ಯಾಹ್ನ 2 ಗಂಟೆಗೆ ಉಡುಪಿಯ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಪರ್ಯಾಯ ಮಠಾಧೀಶರು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. ಸಾಧಕ ಶಾಲೆ ಪ್ರಶಸ್ತಿ- ಪದವಿಪೂರ್ವ ಕಾಲೇಜು […]