ಬಲಿಷ್ಠ ಮತ್ತು ಸಮೃದ್ಧ ಉಡುಪಿಯ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಿ: ಸಚಿವ ಸುನೀಲ್ ಕುಮಾರ್

ಉಡುಪಿ: ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷಗಳಾಗಿದ್ದು, ಮುಂದಿನ 25 ವರ್ಷಗಳಲ್ಲಿ, ಜಿಲ್ಲೆಯನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿ ಪಡಿಸುವ ಯೋಜನೆಗಳ ಕುರಿತಂತೆ ದಿಕ್ಸೂಚಿಯನ್ನು ರಚಿಸಿ, ಅದರಂತೆ ಕಾರ್ಯನಿರ್ವಹಿಸುವ ಮೂಲಕ ಬಲಿಷ್ಠ ಮತ್ತು ಸಮೃದ್ಧ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಶನಿವಾರ ಪುರಭವನದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ದಿಕ್ಸೂಚಿ […]

ಹೆಜಮಾಡಿಯಲ್ಲಿ ಟೋಲ್ ಶುಲ್ಕ ಯಥಾಸ್ಥಿತಿ ಕಾಪಾಡಿ: ಅಧಿಕಾರಿಗಳಿಗೆ ಎಸ್.ಅಂಗಾರ ಸೂಚನೆ

ಉಡುಪಿ: ಜಿಲ್ಲೆಯ ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಈ ಹಿಂದೆ ಪಡೆಯುತ್ತಿದ್ದ ದರಗಳನ್ನು ಮಾತ್ರ ಪಡೆಯುವಂತೆ ಹಾಗೂ ಯಾವುದೇ ಕಾರಣಕ್ಕೂ ಸುರತ್ಕಲ್ ಟೋಲ್ ಪ್ಲಾಜಾ ವಿಲೀನದ ಪರಿಷ್ಕೃತ ದರಗಳನ್ನು ಪಡೆಯದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚನೆ ನೀಡಿದರು. ಅವರು ಶನಿವಾರ ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಟೋಲ್ ಪ್ಲಾಜಾವನ್ನು ತೆರವುಗೊಳಿಸಿ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ […]

ಸಂವಿಧಾನದ ಆಶಯದ ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕ್ರೀಡೆ ಸಹಕಾರಿ: ಡಾ. ಅಶ್ವಥ್ ನಾರಾಯಣ್

ಉಡುಪಿ: ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದು. ಇಂತಹ ಚಟುಚಟಿಕೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕ್ರೀಡೆಯ ಮೂಲಕ ಸಮರ್ಥವಾಗಿ ನೀಡಬಹುದಾಗಿದ್ದು, ಸಂವಿಧಾನದ ಆಶಯಗಳಿಗೆ ಎಲ್ಲರೂ ಬದ್ದರಾಗಿರಬೇಕು ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ […]

ನಾಡದೇವಿಯ ಚಿತ್ರ ಅಂತಿಮಗೊಳಿಸಿದ ಸಮಿತಿ: ಸರ್ಕಾರಕ್ಕೆ ಶಿಫಾರಸು ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು ಎಲ್ಲ ಅಧಿಕೃತ ಉದ್ದೇಶಗಳಿಗೆ ಕನ್ನಡ ಮಾತೆ, ಭುವನೇಶ್ವರಿ ದೇವಿಯ ಚಿತ್ರವನ್ನು ಚಿತಪಡಿಸಲು ಸರ್ಕಾರವು ನೇಮಿಸಿದ ಐದು ಸದಸ್ಯರ ಸಮಿತಿಯು ಚಿತ್ರವನ್ನು ಅಂತಿಮಗೊಳಿಸಿದೆ. ನಾಡದೇವಿಯ ನಿರ್ದಿಷ್ಟ ಚಿತ್ರದ ಕೊರತೆಯಿರುವುದನ್ನು ಮನಗಂಡ ಸರ್ಕಾರ ಎಲ್ಲ ಅಧಿಕೃತ ಉದ್ದೇಶಗಳಿಗೆ ಉಪಯೋಗಿಸಲು ಏಕಪ್ರಕಾರದ ಚಿತ್ರವನ್ನು ಆಯ್ಕೆ ಮಾಡಲು ಡಿ.ಮಹೇಂದ್ರ ಅವರ ಅಧ್ಯಕ್ಷತೆಯಲ್ಲಿ ಐವರು ಚಿತ್ರಕಲಾವಿದರ ಸಮಿತಿಯನ್ನು ರಚಿಸಿತ್ತು. ಲಲಿತಾ ಕಲಾ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಡಿ. ಮಹೇಂದ್ರ ಅವರ ಅಧ್ಯಕ್ಷತೆಯ ಈ ಸಮಿತಿಯು ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ […]

ನಾಡದೇವಿಯ ಅಧಿಕೃತ ಚಿತ್ರ ರಚನೆಗೆ ತಜ್ಞರ ಸಮಿತಿ ರಚನೆ: ವಿ. ಸುನಿಲ್ ಕುಮಾರ್

ಬೆಂಗಳೂರು: ರಾಜ್ಯದ ನಾಡದೇವತೆಯ ಚಿತ್ರವನ್ನು ವಿವಿಧ ಚಿತ್ರಪಟಗಳಲ್ಲಿ ವಿವಿಧ ರೀತಿಯಾಗಿ ಚಿತ್ರಿಸಿರಿವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರ ಅವಶ್ಯಕವಾಗಿತ್ತು.ಈ ಹಿನ್ನಲೆಯಲ್ಲಿ ನಾಡದೇವತೆಯ ಪ್ರಮಾಣಿತ ಮತ್ತು ಅಧಿಕೃತ ಚಿತ್ರ ಆಯ್ಕೆ ಮಾಡಿ ಶಿಫಾರಸ್ಸು ಮಾಡಲು ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರರವರ ನೇತೃತ್ವದಲ್ಲಿ ಐವರು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಆಯ್ಕೆ ಮಾಡಿ ಶಿಫಾರಸ್ಸು ಮಾಡುವ ಚಿತ್ರವನ್ನು ಅಂತಿಮಗೊಳಿಸಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಪಯೋಗಿಸಲು ಹಾಗೂ ಶಾಲಾ-ಕಾಲೇಜುಗಳ ಗೋಡೆಯ ಮೇಲೆ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ […]