ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನ: ಸ್ಪಷ್ಟೀಕರಣ ನೀಡಿದ ಚಿತ್ರತಂಡ

ಬೆಂಗಳೂರು: ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಟ್ವೀಟ್ ಮಾಡಿದ್ದಾರೆ. ಹೆಡ್ ಬುಷ್ ಚಿತ್ರದ ನಟ […]
ದೈವ ನರ್ತಕರಿಗೆ ತಿಂಗಳಿಗೆ ರೂ. 2 ಸಾವಿರ ಮಾಸಶನ: ಸಚಿವ ಸುನಿಲ್ ಕುಮಾರ್ ಘೋಷಣೆ

ಉಡುಪಿ/ಮಂಗಳೂರು: ಕರಾವಳಿ ಭಾಗದಲ್ಲಿ ದೈವ ನರ್ತಕರಿಗೆ ದೀಪಾವಳಿ ಶುಭಸುದ್ದಿ ಬಂದಿದೆ. ದೈವ ನರ್ತಕರಿಗೆ ಮಾಸಾಶನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ […]
ಹಿಂದೂ ಸಮಾಜದ ಒಗ್ಗಟ್ಟು ಮತ್ತು ಧರ್ಮ ಜಾಗೃತಿಗಾಗಿ ದುರ್ಗಾದೌಡ್: ಸುನಿಲ್ ಕುಮಾರ್

ಕಾರ್ಕಳ: ಅ.2 ರಂದು ಜಿಲ್ಲೆಯಲ್ಲಿ ದುರ್ಗಾ ದೌಡ್ ಆಯೋಜಿಸಲಾಗಿದ್ದು, ಅದರ ಪೂರ್ವಾಭಾವಿ ಸಭೆ ಸೆ.25 ರಂದು ಕಾರ್ಕಳದ ಗಾಂಧಿ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದಲ್ಲಿ ಜರುಗಿತು. ದೇಶದಲ್ಲಿ ಪ್ರಸಕ್ತ ವಾತಾವರಣವನ್ನು ಗಮನಿಸಿದಾಗ ಹಿಂದೂ ಸಮಾಜವು ಒಗ್ಗಟ್ಟಿನೊಂದಿಗೆ ಜಾಗೃತ ಸಮಾಜವನ್ನು ರೂಪಿಸುವ ಅಗತ್ಯವಿದೆ. ದೇಶ ವಿರೋಧೀ ಸಂಘಟನೆಗಳು ವಿಧ್ವಂಸ ಕೃತ್ಯದಲ್ಲಿ ತೊಡಗಿದ್ದು, ತನಿಖೆಯಿಂದ ಸತ್ಯ ಬಯಲಾಗುತ್ತಿದೆ. ಇಂತಹ ವಿಷಮ ಸನ್ನಿವೇಶದಲ್ಲಿ ಧರ್ಮ ಜಾಗೃತಿಯ ಸಂಕೇತವಾಗಿ ಅ.2 ರಂದು ದುರ್ಗಾ ದೌಡ್ ಅನ್ನು ಆಯೋಜಿಸಲಾಗುತ್ತಿದೆ ಎಂದು […]
ಬೆಳ್ಮಣ್: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ ಭಾಗಿ

ಬೆಳ್ಮಣ್: ಶನಿವಾರದಂದು ಇಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಚಿತ್ರ ನಟ ವಿಜಯ ರಾಘವೇಂದ್ರ ಭಾಗವಹಿಸಿದರು. ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರನ್ನು ಆದರದಿಂದ ಬರಮಾಡಿಕೊಂಡರು. ಬೆಳ್ಮಣ್ ಬಿಲ್ಲವರ ಸಂಘದ ವತಿಯಿಂದ ವಿಜಯ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.
ನಾರಾಯಣ ಗುರುಗಳ ತತ್ವಾದರ್ಶ ಪಾಲಿಸಿ ವಿಶ್ವಶಾಂತಿಗೆ ಮುಂದಡಿಯಿಡಬೇಕು: ಸಚಿವ ಸುನಿಲ್ ಕುಮಾರ್

ಉಡುಪಿ: ಎಲ್ಲಾ ಧರ್ಮಗಳು ಮನುಷ್ಯನ ಒಳಿತನ್ನೇ ಬಯಸುತ್ತವೆ ಎಂಬ ನಾರಾಯಣಗುರುಗಳ ಸಂದೇಶ ಅರಿಯುವ ಮೂಲಕ ವಿಶ್ವದಾದ್ಯಂತ ವಿವಿಧ ಧರ್ಮಗಳ ನಡುವೆ ನಡೆಯುತ್ತಿರುವ ವಾದವನ್ನು ಕೊನೆಗಾಣಿಸಿ, ವಿಶ್ವಶಾಂತಿ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬಿಲ್ಲವರ ಸೇವಾ ಸಂಘ ಬನ್ನಂಜೆ ಇವರ ಸಹಯೋಗದಲ್ಲಿ ನಡೆದ ಬ್ರಹ್ಮಶ್ರೀ […]