ಆದ್ಯತೆಯ ಮೇರೆಗೆ ಎಂಡೋ ಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಬಗೆಹರಿಸಿ: ಸಚಿವ ಅಂಗಾರ

ಉಡುಪಿ: ಜಿಲ್ಲೆಯಲ್ಲಿನ ಎಂಡೋಸಲ್ಫಾನ್ ಬಾಧಿತರ ಆರೋಗ್ಯ ಸುಧಾರಣೆ ಮತ್ತು ಪುರ್ನವಸತಿಗೆ ಸಂಬಧಪಟ್ಟ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಎಂಡೋಸಲ್ಫಾನ್ ಸಾಮಾನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾರ್ಚ್ 2019 ರಿಂದ ಇದುವರೆಗೆ ಹೊಸದಾಗಿ ಗುರುತಿಸಲಾಗಿರುವ 110 ಮಂದಿ ಎಂಡೋಸಲ್ಫಾನ್ ಬಾಧಿತರ ಪಟ್ಟಿಗೆ ಅನುಮೋದನೆ ನೀಡಿ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದ ಸಚಿವರು, […]

ಸುಳ್ಯ: ಸಚಿವದ್ವಯರಿಂದ ಅತಿವೃಷ್ಟಿ ಪೀಡಿತ ಪ್ರದೇಶದ ಮನೆಗಳ ಪರಿಶೀಲನೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ತೋಡಿಕಾನ, ದೊಡ್ಡ ಕುಮೇರಿ, ಮತ್ತು ಕಲ್ಲುಗುಂಡಿ ಪ್ರದೇಶದ ಮನೆಗಳಿಗೆ ಮೀನುಗಾರಿಕಾ ಸಚಿವ ಎಸ್ ಅಂಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪ್ರದೇಶಗಳ ಸ್ಥಿತಿಗತಿ ನಿರೀಕ್ಷಿಸಿ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಜೊತೆಗಿದ್ದರು.

ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಸರ್ಕಾರ ಕಟಿಬದ್ಧ: ವಿ. ಸುನಿಲ್ ಕುಮಾರ್

ಕಾರ್ಕಳ: ಪ್ರಧಾನಿ ನರೇಂದ್ರ ಮೋದಿ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ, ಕಾರ್ಕಳ ಬಿಜೆಪಿ ಎಸ್.ಟಿ.ಮೋರ್ಚಾ ವತಿಯಿಂದ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಭಾಗಿತ್ವದಲ್ಲಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮ ಆರೋಗ್ಯ ತಪಾಸಣಾ ಶಿಬಿರವು ಮುದ್ರಾಡಿ ಗ್ರಾಪಂ ವ್ಯಾಪ್ತಿಯ ಕಬ್ಬಿನಾಲೆ ಮೇಲ್ಮಠ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ […]

ದ.ಕ ಜಿಲ್ಲೆಯಲ್ಲಿ ಕಡತ ವಿಲೇವಾರಿ ಅಭಿಯಾನ: ಫೆ. 28 ರೊಳಗೆ ಬಾಕಿ ಇರುವ 82000 ಕಡತಗಳಿಗೆ ಮುಕ್ತಿ: ಸುನಿಲ್ ಕುಮಾರ್

  ದಕ್ಷಿಣ ಕನ್ನಡದ 45 ಸರಕಾರಿ ಕಚೇರಿಗಳಲ್ಲಿ ಬಾಕಿ ಉಳಿದಿರುವ 82,400 ಕಡತಗಳನ್ನು ಫೆ.19 ರಿಂದ ಫೆ.28ರೊಳಗೆ ವಿಶೇಷ ಕಡತ ತೆರವು ಅಭಿಯಾನದಡಿ ವಿಲೇವಾರಿ ಮಾಡಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದರು. ಅವರು ಫೆಬ್ರವರಿ 19 ಶುಕ್ರವಾರದಂದು ಮಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಕಡತ ವಿಲೇವಾರಿ ಅಭಿಯಾನಕ್ಕೆ ಚಾಲನೆ ನೀಡುತ್ತಾ ಮಾತನಾಡಿ, ಬಾಕಿ ಉಳಿದಿರುವ ಕಡತಗಳನ್ನು ಬಾಕಿ ಉಳಿದಿರುವ ಹಳೆಯ ಕಡತಗಳು, ಕುಂದುಕೊರತೆಗಳ ಬಾಕಿ ಇರುವ ಅರ್ಜಿಗಳು […]