ಸೆ.10ರಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ
ಮಣಿಪಾಲ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸೆ 10ರ ಶುಕ್ರವಾರದಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ ಇರಲಿದೆ. ಆದಾಗ್ಯೂ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.