ರಾಜ್ಯದಾದ್ಯಂತ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ: ಸಚಿವ ಡಾ. ಕೆ. ಸುಧಾಕರ್
ಚಿಕ್ಕಬಳ್ಳಾಪುರ: ಇನ್ನು ಮುಂದೆ ವಾರದಲ್ಲಿ ಒಂದು ದಿನ ರಾಜ್ಯದಾದ್ಯಂತ ಲಸಿಕಾ ಉತ್ಸವ ನಡೆಸಲಾಗುವುದು. ಶೀಘ್ರದಲ್ಲಿಯೇ ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡುವರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಶಿಡ್ಲಘಟ್ಟ ತಾಲ್ಲೂಕಿನ ಸಾದಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಮತ್ತು ಮುಖ್ಯಮಂತ್ರಿ ಅವರು ಕೇಂದ್ರ ಆರೋಗ್ಯ ಸಚಿವರನ್ನು ಇತ್ತೀಚೆಗೆ ಭೇಟಿ ಮಾಡಿ ರಾಜ್ಯಕ್ಕೆ ನಿತ್ಯ 5 ಲಕ್ಷಕ್ಕಿಂತಲೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಕೋರಿದ್ದೇವೆ ಎಂದರು. ಪ್ರತಿ ದಿನ ಕನಿಷ್ಠ 5 ಲಕ್ಷ […]