ತೆಂಕನಿಡಿಯೂರು: ಜುಲೈ 13 ರಂದು ಹಡಪದ ಅಪ್ಪಣ್ಣ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯು ಜುಲೈ 13 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. […]

ಮಾಹೆ: ‘ವಚನಗಳನ್ನು ಓದು’- ಪ್ರೊ.ರಾಜೇಂದ್ರ ಚೆನ್ನಿ ಅವರಿಂದ ವಿಶೇಷ ಉಪನ್ಯಾಸ

ಮಣಿಪಾಲ: ಹನ್ನೆರಡನೇ ಶತಮಾನದ ಶರಣ ಚಳವಳಿಯ ‘ನವ ರಾಜಕಾರಣ’ ಕರ್ನಾಟಕದಲ್ಲಿ ಅಪೂರ್ವವಾದ ವಚನ ಸಾಹಿತ್ಯಕ್ಕೆ ನಾಂದಿಯಾಗಿ ‘ನವ ಕಾವ್ಯಮೀಮಾಂಸೆ’ಯ ಹುಟ್ಟಿಗೆ ಕಾರಣವಾಯಿತು ಎಂದು ಖ್ಯಾತ ಸಂಸ್ಕೃತಿ ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ ಅವರು ನುಡಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ‘ವಚನಗಳನ್ನು ಓದು’ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ.ಚೆನ್ನಿ, ಶರಣ ಚಳವಳಿಯ ಸಂದರ್ಭದಲ್ಲಿ ವಿವಿಧ ವೃತ್ತಿ ಮತ್ತು ಸಾಮಾಜಿಕ ಸ್ತರಗಳಿಗೆ ಸೇರಿದ ಪುರುಷ ಮತ್ತು ಮಹಿಳೆಯರು ಕಾವ್ಯಗಳನ್ನು ರಚಿಸಿ ಆ […]