ಹಾಡು ನಿಲ್ಲಿಸಿದ ಕುಂದಾಪುರದ  ಟ್ರೋಲ್ ಕಿಂಗ್ ವೈಕುಂಠ :  ಜನಮನಗೆದ್ದ ಬಿಂದಾಸ್ ಹಾಡುಗಾರ ಇನ್ನಿಲ್ಲ

ಕುಂದಾಪುರ: ತನ್ನ ವಿಭಿನ್ನ ಶೈಲಿಯ ಹಾಡುಗಾರಿಕೆ ಮೂಲಕ ಕುಂದಾಪುರದ ಜನರನ್ನು ರಂಜಿಸುತ್ತಿದ್ದ ರಾಕ್‌ಸ್ಟಾರ್ ಖ್ಯಾತಿಯ ಕುಂದಾಪುರದ ವೈಕುಂಠ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಹಂಗಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ನೇರಂಬಳ್ಳಿ ನಿವಾಸಿ ವೈಕುಂಠ ಕಳೆದ ನಾಲ್ಕು ದಿನಗಳಿಂದ ಕುಂದಾಪುರದ ಇಂದಿರಾ ಕ್ಯಾಂಟೀನ್ ಹಿಂಭಾಗದಲ್ಲಿರುವ ಪಶು ಆಸ್ಪತ್ರೆಯ ಆವರಣದಲ್ಲಿ ತೀವ್ರ ಅಸ್ವಸ್ಥಗೊಂಡು ಮಲಗಿದ್ದರು. ಸ್ಥಳೀಯರು ಅಸ್ವಸ್ಥಗೊಂಡಿರುವ ವೈಕುಂಠ ಅವರ ಫೋಟೋ ಕ್ಲಿಕ್ಕಿಸಿ ತುರ್ತು ಚಿಕಿತ್ಸೆಯ ಅಗತ್ಯವಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರಹ ಪ್ರಕಟಿಸಿದ್ದರು. ಕೂಡಲೇ ಸಾಮಾಜಿಕ ಕಾರ್ಯಕರ್ತ ಜೋಯ್ ಕುಂದಾಪುರ ವೈಕುಂಠ […]