ವಕ್ವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ವಾಹನ ಕೊಡುಗೆ

ಕುಂದಾಪುರ: ತನ್ನ ಊರಿನ ಸರಕಾರಿ ಶಾಲೆಗೆ ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಶಾಲಾ ವಾಹನವಾಗಿ ಕಾರನ್ನು ಕೊಡುಗೆಯಾಗಿ ನೀಡಿದ್ದಾರೆ. ವಕ್ವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಹನ ನೀಡಿದ್ದು ಶನಿವಾರ ಮಧ್ಯಾಹ್ನ ವಾಹನದ ಕಿಲೀ ಕೈ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯೋಪಧ್ಯಾಯರಿಗೆ ವಾಹನದ ಕಿಲಿಕೈ ಹಸ್ತಾಂತರಿಸಿದ ಬಳಿಕ ಮಾತನಾಡಿದ ದಾನಿ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಆಂಗ್ಲ ಮಾಧ್ಯಮ ಶಾಲೆಗಳ ಹೆಚ್ಚುವಿಕೆಯಿಂದ ಸರಕಾರಿ ಕನ್ನಡ ಶಾಲೆಗಳು ಅಳಿವಿನಂಚಿನತ್ತ ಸಾಗುತ್ತಿರುವುದು ನಿಜಕ್ಕೂ ದುರದೃಷ್ಟಕರ. ಸಮಾಜದಲ್ಲಿ […]