ಕಾಸರಗೋಡು-ತಿರುವನಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ವೇಳಾಪಟ್ಟಿ ಮತ್ತು ಟಿಕೆಟ್ ದರಗಳು ಇಂತಿವೆ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಏಪ್ರಿಲ್ 25 ರಂದು ಉದ್ಘಾಟಿಸಲಿದ್ದಾರೆ. ತಿರುವನಂತಪುರಂ ಮತ್ತು ಕಾಸರಗೋಡು ಮಧ್ಯೆ ಕೇರಳದ 11 ಜಿಲ್ಲೆಗಳ ನಡುವೆ ಸಂಚರಿಸಲಿದೆ. ಇದು ದೇಶದ 16ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಾಗಿದೆ. ಕಾಸರಗೋಡು – ತಿರುವನಂತಪುರಂ ಸೆಂಟ್ರಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಕಾರ್ಯನಿರ್ವಹಿಸಲಿದ್ದು, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ ಟೌನ್, ತ್ರಿಶೂರ್, ಶೋರನೂರು, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ನಿಲುಗಡೆಯಾಗಲಿದೆ. ವಂದೇ […]

‘ಟ್ರೈನ್‌ 18’ ರೈಲಿಗೆ ‘ವಂದೇ ಭಾರತ ಎಕ್ಸ್‌ಪ್ರೆಸ್’ ಹೆಸರು

ನವದೆಹಲಿ: ದೇಶಿಯ ತಂತ್ರಜ್ಞಾನ ವ್ಯವಸ್ಥೆಯಲ್ಲಿ ನಿರ್ಮಿಸಿದ ಅತಿ ವೇಗದ ರೈಲಿಗೆ ‘ವಂದೇ ಭಾರತ ಎಕ್ಸ್‌ಪ್ರೆಸ್’ ಎಂದು ಹೆಸರಿಡಲಾಗಿದೆ ಎಂದು ರೈಲ್ವೆ ಸಚಿವ ಪೀಯೂಷ್ ಗೋಯಲ್ ರವಿವಾರ ಈ ಮಾಹಿತಿ ತಿಳಿಸಿದ್ದಾರೆ. ಈ ರೈಲು ನಿರ್ಮಾಣ ಆರಂಭಿಸಿದಾಗ ‘ಟ್ರೈನ್‌ 18’ ಎಂದು ಹೆಸರಿಡಲಾಗಿತ್ತು. ಬಳಿಕ ಇದಕ್ಕೆ ಹೆಸರಿಡಲು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಆದರೆ ಅಂತಿಮವಾಗಿ  ‘ವಂದೇ ಭಾರತ ಎಕ್ಸ್‌ಪ್ರೆಸ್’ ಎಂದು ನಿಗದಿಪಡಿಸಲಾಯಿತು. ಇದು ಗಣರಾಜ್ಯೋತ್ಸವ ಸಂದರ್ಭದಲ್ಲಿ ಜನರಿಗೆ ನೀಡುತ್ತಿರುವ ಕೊಡುಗೆಯಾಗಿದೆ ಎಂದರು. ದೆಹಲಿಯಿಂದ ವಾರಾಣಸಿಗೆ ಸಂಚರಿಸುವ ಸಾಮರ್ಥ್ಯ ಇರುವ ಈ ರೈಲನ್ನು ಪ್ರಧಾನಮಂತ್ರಿ ನರೇಂದ್ರ […]