ವಾರಾಹಿ ಯೋಜನೆ ಸಮಸ್ಯೆ ಶೀಘ್ರವೇ ಇತ್ಯರ್ಥ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ : ವಾರಾಹಿ ನೀರಾವರಿ ಯೋಜನೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ. ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ. ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. […]