2022ನೇ ಸಾಲಿನೊಳಗೆ ಉಡುಪಿ ಜನತೆಗೆ ವಾರಾಹಿ ನೀರು: ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ: ಎಚ್ಚರಿಕೆ

ಉಡುಪಿ: ವಾರಾಹಿಯಿಂದ ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಮಾಡಬೇಕು. 2022ನೇ ಸಾಲಿನೊಳಗೆ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಎಚ್ಚರಿಸಿದರು. ವಾರಾಹಿಯಿಂದ ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಉಡುಪಿ ನಗರದ ಜನತೆಗೆ ಕುಡಿಯುವ ನೀರು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು […]