ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಉಡುಪಿ: ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನ ಹಾಗೂ ಮಾತೃಮಂಡಳಿ ಕಡಿಯಾಳಿ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಕಡಿಯಾಳಿ ಕಾತ್ಯಾಯನಿ ಮಂಟಪದಲ್ಲಿ 39 ನೇ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಪಾಡಿಗಾರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರದಂದು ಸಂಜೆ ಸಂಪನ್ನಗೊಂಡಿತು. ಮಾತೃಮಂಡಳಿಯ ವತಿಯಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು. ಶ್ರೀದೇವಿಗೆ ವಿಶೇಷ ಅಲಂಕಾರ, ಬೃಹತ್ ಮಂಡಲದಲ್ಲಿ ವರಮಹಾಲಕ್ಷ್ಮೀ ಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ದೇವಳದ ಅಧ್ಯಕ್ಷ ರವಿರಾಜ್ ಆಚಾರ್ಯ, ಶಾಸಕ ಯಶ್ ಪಾಲ್ […]