ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ: ಜಿಲ್ಲಾಧಿಕಾರಿ

ಉಡುಪಿ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತವು ಹಳ್ಳಿಗೆ ಭೇಟಿ ನೀಡಿದೆ. ಜನರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಹೆಬ್ರಿ ತಾಲೂಕಿನ ವರಂಗ ಗ್ರಾಮ ವ್ಯಾಪ್ತಿಯ ಮುನಿಯಾಲಿನ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಗರದಿಂದ ದೂರವಿರುವ ಗ್ರಾಮೀಣ ಪ್ರದೇಶದ ಜನರು ವಾಸವಾಗಿರುವ ಸ್ಥಳಕ್ಕೆ ಅಧಿಕಾರಿಗಳು ಹೋಗಿ ಅವರ ಸಮಸ್ಯೆಗಳನ್ನು […]

ಮೇ 27 ರಂದು ವರಂಗದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಮೇ 27 ರಂದು ಬೆಳಗ್ಗೆ 10 ಗಂಟೆಗೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ವರಂಗ ಗ್ರಾಮಕ್ಕೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ವರಂಗ ಗ್ರಾಮಕರಣಿಕರ ಕಚೇರಿಗೆ ಮುಂಚಿತವಾಗಿ ನೀಡಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.