ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಪ್ರೋಜೆಕ್ಟ್ ಕೋ- ಆರ್ಡಿನೇಟರ್ (ಸ್ನಾತಕೋತ್ತರ ಪದವಿ) ಹಾಗೂ ಸಲಹೆಗಾರರು/ ಸಮಾಜ ಸೇವಕರ (ಎಂ.ಎಸ್.ಡಬ್ಲ್ಯೂ) ತಲಾ ಒಂದು ಹುದ್ದೆಗಳಿಗೆ ಗೌರವಧನ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಬನ್ನಂಜೆ, ಉಡುಪಿ ಕಚೇರಿ ದೂರವಾಣಿ ಸಂಖ್ಯೆ: 0820- 2526394 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ರಸ್ತೆ ಸುರಕ್ಷತೆ ಅಡಿಯಲ್ಲಿ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದಲ್ಲಿ ಆಪ್ತ ಸಮಾಲೋಚಕರು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರ ತಲಾ 1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  Udupi.nic.in ಅಥವಾ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.